ಕಾಲವೆಂಬ ಪರಿಧಿಯಲ್ಲಿ,ಕವನವಾದ ವಾಹಿನಿ
Sunday, November 22, 2009
ಮೋಹಿನಿ ....
ಕಾಲವೆಂಬ ಪರಿಧಿಯಲ್ಲಿ,ಕವನವಾದ ವಾಹಿನಿ
Saturday, November 7, 2009
ಏನಾಯ್ತೆ ಗೆಳತಿ
ಚಂದ್ರ ಕಿರಣ ಕೂಡ ಬೆಂಕಿ ಮಳೆಯ ಸುರಿಸಿದೆ
ಮುದ್ದು ಮೊಗದ ನಿನ್ನ ನೋಟ ಎಲ್ಲಿ ಹೋಗಿದೆ
ಹಂಸದಂಥ ನಡಿಗೆಯಿಂದು ಭಾರವಾಗಿದೆ ಗೆಳತಿ ಕಾಣದಾಗಿದೆ
ಹಕ್ಕಿ ಕೂಡ ಹಾಡಲಿಲ್ಲ ನಿನ್ನ ನೋಡದೆ
ಕೋಳಿ ತಾನು ಕೂಗಲಿಲ್ಲ ಮುಖವ ಕಾಣದೆ
ರವಿಯು ಕೂಡ ಬಾಡಿ ಹೋದ ಬಿಸಿಲು ಬೀರದೆ
ನಿನ್ನ ಮನದ ಬೇಗೆಯನ್ನು ಹೇಳಬಾರದೇ ಗೆಳತಿ ನೋಡಲಾಗದೆ
ಚದುರಿ ಹೋಯ್ತು ಮೋಡವೆಲ್ಲ ಮಳೆಯ ಸುರಿಸದೆ
ಬೀಸೊ ಗಾಳಿ ಮೌನವಾಯ್ತು ತಂಗಾಳಿ ಸೂಸದೆ
ಹರಿಯೋ ನದಿಯೂ ಹರಿಯಲಿಲ್ಲಂಬಿಗನ ಕಾಣದೆ
ನಿನ್ನ ಚಿಂತೆ ದೂರ ಮಾಡ್ವೆ ಹೇಳು ನನ್ನೆದೆ, ಗೆಳತಿ ಬಳಿಗೆ ಬಾರದೆ
ದೂರ ಕಡಲು ಹರಿವ ತೆನೆಯು ನಿಂತು ನೋಡಿದೆ
ಬಾನ ರವಿಯು ಚಂದ್ರಮಂಗೆ ದಾರಿ ತೋರಿದೆ
ಕತ್ತಲಲ್ಲಿ ಬೆಳಕ ತುಂಬಿ ಲಾಲಿ ಹಾಡಿದೆ
ನಿನ್ನ ಬಿಂಬ, ಚಂದ್ರ ಬಿಂಬ ಒಂದೆ ಆಗಿದೆ ಗೆಳತಿ ಮನಸು ತುಂಬಿದೆ
Sunday, November 1, 2009
Monday, October 26, 2009
ಮದುಮಗಳು
Tuesday, October 13, 2009
S-PAIN ನ PAIN ನಿಂದ SWEDEN ವರೆಗೆ ...ಭಾಗ 2
ಇಂಥಹ ಸಂಧರ್ಭದಲ್ಲಿ ನನಗೆ ಧೈರ್ಯ ತುಂಬಿದ ನನ್ನೆಲ್ಲ ಮಿತ್ರ ಮಿತ್ರೆಯರಿಗೆ, ಬ್ಲಾಗ್ ಗೆಳೆಯರಿಗೆ, ಹಾಗೂ ನೆಚ್ಚಿನ ಮಡದಿಗೆ ಅನಂತ ಧನ್ಯವಾದಗಳು
Tuesday, October 6, 2009
ಬದುಕಿದೆಯಾ ಬಡ ಜೀವವೇ? ''S-PAIN'' ಪ್ರವಾಸ ತಂದ PAIN ಪ್ರವಾಸ.....
Tuesday, September 29, 2009
ಷೋಡಷಿಯು ಅವಳು ....
ಮನೆಯ ಮಂದಿರದಲ್ಲಿ ಮನದ ಆಳದ ಬೆಡಗಿ
ಮನಸ್ಸನ್ನು ಕದ್ದಂಥ ಮಲೆನಾಡಿನ ಹುಡುಗಿ
ಮಲ್ಲಿಗೆಯೋ ಸಂಪಿಗೆಯೋ ಮನಸೆಲ್ಲ ಜಾಜಿ
ಮಿಂಚಿನ ಸೆಳಕಿನಲಿ ತಪ್ಪೆಲ್ಲ ರಾಜಿ
ಮುದ್ದಿನ ಮಾವನ ಮುತ್ತಿನ ಮಗಳು
ಮೆತ್ತನೆಯ ಮಾತಿಂದ ಮನವ ಗೆದ್ದಿಹಳು
ಮೈಮನದ ಮಕರಂದ ಮಾನಿನಿಗೆ ಚಂದ
ಮನವನ್ನು ತಣಿಸುವಳು ನೋಡು ಮುದದಿಂದ
ಮಗುವಂತೆ ಬಂದು ಮಗುವನ್ನೇ ನೀಡಿದಳು
ಮಕ್ಕಳಾದವು ಎರಡು ಒಂದು ಮರಿ ಮಗಳು
ಮಂದಹಾಸವ ಬೀರಿ ಈಗಲೂ ಕಾಯುವಳು
ಹರೆಯ ಅರವತ್ತಾರು, ಷೋಡಷಿಯು ಅವಳು
Tuesday, September 22, 2009
ಅವಳ ನೆನಪು
ಬಿಟ್ಟು ಬಂದೆ ಬಿಟ್ಟು ಬಂದೆ ನಮ್ಮ ನೆಲವನು
ಮಮತೆಯಿಂದ ಸಲಹಿದಂತ ತಾಯಿ ಮಡಿಲನು
ತಿದ್ದಿ ತೀಡಿ ಬೆಳೆಸಿದಂತ ತಂದೆ ಮಾತನು
ಅಣ್ಣ ಅಕ್ಕ ತೋರಿದಂತ ಪ್ರೀತಿ ನೆನಪನು
ನಮ್ಮ ನೆಲದ ಗಂಧ ಗಾಳಿ ಇಲ್ಲಿ ರುಚಿಸದು
ಇವರು ತೋರ್ವ ಮಮತೆ ಪ್ರೀತಿ ಕ್ಷಣಿಕವಾದುದು
ಅಲ್ಲಿ ಸಿಗುವ ಮಣ್ಣ ವಸುಧೆ ಇಲ್ಲಿ ಇಲ್ಲವೊ
ಇಲ್ಲಿ ಇರುವ ಮಣ್ಣಿನಲ್ಲಿ ಪ್ರಣಯ ಇಲ್ಲವೊ
ನಮ್ಮ ಊರು ನಮ್ಮ ಜನ ಏನು ಚಂದವೋ
ಬಡವನೂಟ ಬಾಳಿನಲ್ಲಿ ಸಿರಿಯ ಭಾಗ್ಯವೋ
ಹರುಕ ಸೀರೆ ಮುರುಕ ಬಟ್ಟೆ ನಮ್ಮ ತಾಯಿಯೋ
ಆದರವಳು ನಮ್ಮ ಮನಸ ಪ್ರೇಮದಾಯಿಯೋ
ಎಲ್ಲ ಇದೆ ಇಲ್ಲಿ ಎಂಬ ಪೊಳ್ಳು ಮನಸಿದೋ
ಹಣದ ಮುಂದೆ ಮನವು ಮಾನ ಮಾರಿಕೊಂಬುದೋ
ಅನುರಾಗದ ಸೆಲೆಗೆ ಇಲ್ಲಿ ಬೆಲೆಯೇ ಇಲ್ಲವೊ
ಇದ್ದರೂನು ತಾಯ್ಗೆ ಬಟ್ಟೆ ಹರುಕೆ ಚಂದವೋ
ಏನೇ ಆದರು ನಮ್ಮ ತಾಯ್ಗೆ ನಾವೇ ಮಕ್ಕಳು
ನಿಂದಿಸಿದರೂ ಸಲಹುತಿಹುದು ಅವಳ ಹೊಕ್ಕಳು
ನಮ್ಮ ನೀರು ನಮ್ಮ ಗಾಳಿ ಗಂಧದ ಗುಡಿಯೋ
ಇರುವುದೆಲ್ಲ ಬಿಟ್ಟು ಇಲ್ಲಿ ಅಲ್ಲಿಗೆ ನಡಿಯೋ
Tuesday, September 15, 2009
ಆಧ್ಯಾತ್ಮದ ಹರಿಕಾರನಾಗಿ ವೈಜ್ಞಾನಿಕ ಕ್ರಾಂತಿಗೆ ಮುನ್ನುಡಿ ಬರೆದು ನಮ್ಮನ್ನಗಲಿದ ಶ್ರೀ ವಿಭುದೇಶರಿಗೆ ಭಾವಪೂರ್ಣ ನಮನ

Saturday, September 12, 2009
ಮರೆಯದಿರು ಮನವೇ
Friday, August 28, 2009
ಸ್ವೀಡಿಷ್ ಕಲಾವಿದೆಗೆ ಒಲಿದ ಓಡಿಸ್ಸಿ ನ್ರತ್ಯ
(ಈ ಲೇಖನವನ್ನು ಪ್ರಕಟಿಸಿದ ''ದಟ್ಸಕನ್ನಡ.ಕಾಮ್''''http://thatskannada.oneindia.in/nri/article/2009/0828-sweden-odissi-dancer-annette-pooja.html ಗೂ ಮತ್ತು ''ಕನ್ನಡಧ್ವನಿ'' ''http://www.kannadadhvani.com/node/846'' ಗೂ ಕ್ರತಜ್ನತೆಗಳು)
ಸಂಗೀತ ಸುಧೆಯೊಳಗೆ ಮೀಯದವರಾರು
ಕಾಲ್ಗೆಜ್ಜೆ ಸಪ್ಪಳಕೆ ಒಲಿಯದವರಾರು
ನ್ರತ್ಯದಲಿ ನಟರಾಜ ಸೂರೆಗೊಂಡನು ಮನವ
ದೀಪಕ ರಾಗವು ಬೆಳಗಿಸಿತು ಜಗವ
ಸಂಗೀತ ಮತ್ತು ನ್ರತ್ಯ ಎಂಥಹ ಅರಸಿಕರನ್ನು ರಸಿಕತೆಗೆ ಒಯ್ಯುತ್ತವೆ. ಅದೊಂದು ಅಮಲಿದ್ದಂತೆ, ಮನಸ್ಸಿನ ನೋವಿಗೆ ಸಂಜೀವಿನಿ ಇದ್ದಂತೆ, ಆನಂದದ ಸಾಗರದಂತೆ.
ಅದು ಶಾಸ್ತ್ರಬದ್ದ ಭಾರತೀಯ ಸಂಗೀತ-ನ್ರತ್ಯವೇ ಆಗಿರಬಹುದು ಇಲ್ಲವೆ ಪಾಶ್ಚಾತ್ಯರ ಪಾಪ್-ನ್ರತ್ಯ ವೇ ಆಗಿರಬಹುದು. ಅದರಲ್ಲೂ ಭಾರತೀಯ ನ್ರತ್ಯ ಪ್ರಕಾರಗಳಿಗೆ ಸಿಕ್ಕಷ್ಟು ಪ್ರಸಿದ್ದಿ ಜಗತ್ತಿನ ಯಾವ ನ್ರತ್ಯ ಪ್ರಕಾರಗಳಿಗೂ ಸಿಕ್ಕಿಲ್ಲ ಅಂದರೆ ಅತಿಶಯೋಕ್ತಿಯಲ್ಲ. ಆದರೆ ಭಾರತೀಯರಾದ ನಾವು ಅರೆ ಬೆತ್ತಲೆಯ ವಿದೇಶಿ ನ್ರತ್ಯವನ್ನೇ ಸವಿಯುತ್ತಾ ನಮ್ಮ ತನ ವನ್ನು ಮರೆಯುತ್ತಿದ್ದೇವೆ. ವಿದೇಶಿಯರು ಎಂದಕೂಡಲೇ ಕೇವಲ ಬೆತ್ತಲೆ ಕುಣಿಯುವವರು ಎನ್ನುವುದನ್ನು ನಮಗೆ ಗೊತ್ತಿಲ್ಲದೇ ಅಂದುಕೊಂಡುಬಿಟ್ಟಿದ್ದೇವೆ. ನಾವು ನಮ್ಮದನ್ನೇ ಬಿಟ್ಟು ಪರಕೀಯತೆಯನ್ನು ಮೈಗೂಡಿಸಿಕೊಂಡು ಸಂಸ್ಕ್ರತಿಯ ಅಧ:ಪತನಕ್ಕೆ ಕಾರಣೀಭೂತರಾಗುತ್ತಿದ್ದರೆ ಸದ್ದಿಲ್ಲದೆ ಸ್ವೀಡನ್ನಿನ ಮಹಿಳೆಯೊಬ್ಬರು ಭಾರತೀಯ ನ್ರತ್ಯದಲ್ಲಿ ಕಳೆದ ೧೫ ವರ್ಷಗಳಿಂದ ತಪಸ್ಸು ಮಾಡುತ್ತಿದ್ದಾರೆಂದರೆ ಆಶ್ಚರ್ಯವಾಗುತ್ತಿದೆಯೇ?
ಹೌದು, ಸ್ವೀಡನ್ನಿನ ಗೊಥೆನ್ಬರ್ಗ್ ನಲ್ಲಿರುವ ಅನಿಟ್ಟೆ ಪೂಜಾ (ಪೂಜಾ ಎನ್ನುವುದು ಓಡಿಸ್ಸಿ ಗುರು ಇಟ್ಟ ಹೆಸರು) ಕಳೆದ ೧೫ ವರ್ಷಗಳಿಂದ ಓಡಿಸ್ಸಿ ನ್ರತ್ಯ ಕಲಿಯುತ್ತಿದ್ದಾರೆ ಅಷ್ಟೇ ಅಲ್ಲ ಕಲಿಸುತ್ತಿದ್ದಾರೆ. ಭಾರತದ ಎಲ್ಲ ನ್ರತ್ಯ ಪ್ರಕಾರಗಳಲ್ಲೂ ಕೈಯ್ಯಾಡಿಸಿರುವ ಇವರು ಕೊನೆಯದಾಗಿ ಆರಿಸಿಕೊಂಡಿದ್ದು ಓಡಿಸ್ಸಿ ನ್ರತ್ಯವನ್ನು. ಹ್ರದಯಸ್ಪರ್ಶೀ ಅಭಿನಯ, ತಾಳಕ್ಕೆ ತಕ್ಕ ಹೆಜ್ಜೆ, ಹೆಜ್ಜೆಗೆ ತಕ್ಕ ಭಾವದ ಮೂಲಕ ಇಲ್ಲಿಯ ಜನರ ಕಣ್ಮಣಿಯಾಗಿದ್ದಾರೆ. ತಮ್ಮ ಹೆಸರಿನಲ್ಲಿ ಪೂಜಾ ಎನ್ನುವುದನ್ನು ಸೇರಿಸಿಕೊಂಡಿರುವ ಇವರದು ಸುಖೀ ಕುಟುಂಬ. ಇವರ ಗಂಡ ಲಿಯನಾರ್ಡೋ ಒಬ್ಬ ನಟ ಹಾಗೂ ಶಿಕ್ಷಕ. ಇಬ್ಬರು ಮುದ್ದಾದ ಹೆಣ್ಣು ಮಕ್ಕಳು, ಒಬ್ಬಳು ಗಾಯತ್ರಿ, ಇನ್ನೊಬ್ಬಳು ಕರೀಷ್ಮಾ. ಇಬ್ಬರಿಗೂ ಇಟ್ಟ ಭಾರತೀಯ ಮೂಲದ ಹೆಸರು ಅವರ ಭಾರತ ಪ್ರೇಮಕ್ಕೆ ಹಿಡಿದ ಕನ್ನಡಿ.
ಫೋಟೋ: ಲಿಯೋನಾರ್ಡೋ ಸ್ಟೆಫಾನ್ ಮೂಲತ: ಸ್ವೀಡನ್ನಿನಲ್ಲಿಯೇ ಹುಟ್ಟಿ ಬೆಳೆದ ಅನಿಟ್ಟೆ ಪೂಜಾ, ತಮ್ಮ ತಂದೆಯವರಿಂದ ಸಂಗೀತ ಹಾಗೂ ನ್ರತ್ಯಗಳಲ್ಲಿ ಆಸಕ್ತಿ ತಳೆದರು. ನ್ರತ್ಯ ಇವರ ರಕ್ತದಲ್ಲಿಯೇ ಬೆಳೆದಿತ್ತು. ಆದರೆ ಅದು ಭಾರತದೊಂದಿಗೆ ವಿಸ್ತರಿಸುತ್ತದೆ ಎಂಬುದು ಅವರಿಗೂ ತಿಳಿದಿರಲಿಕ್ಕಿಲ್ಲ. ಥಿಯೇಟರ್ ಗಳಲ್ಲಿ ವೇಷ-ಭೂಷಣ ಮಾಡುವವರಾಗಿದ್ದ ಇವರು ಕ್ರಮೇಣ ನ್ರತ್ಯದ ಕಡೆಗೆ ಒಲಿದಿದ್ದೇ ಸೋಜಿಗದ ಕಥೆ.
”ಸ್ಟಾಕ್ ಹೋಮ್ ನಲ್ಲಿ ನಾಟಕ ಅಕಾಡೆಮಿಯಲ್ಲಿ ಕಲಿಯುತ್ತಿದ್ದಾಗ ಅನೇಕ ಏಷ್ಯಾದ ನಿರ್ದೇಶಕರ ಜೊತೆ ಕೆಲಸ ಮಾಡಿದೆ. ಆಗಲೇ ಭಾರತ ನ್ರತ್ಯದ ಬಗೆಗೆ ಜಗತ್ತಿನಾದ್ಯಂತ ಇರುವ ಕೌತುಕತೆ, ಗೌರವ ನನ್ನಲ್ಲಿ ಹೊಸ ಸಂಚಲನ ಉಂಟು ಮಾಡಿತು. ಒಮ್ಮೆ ಕೂಚಿಪುಡಿ ನ್ರತ್ಯವನ್ನು ವೀಕ್ಷಿಸಿದೆ, ಆ ನ್ರತ್ಯಕ್ಕೆ ಸಿಕ್ಕಿದ ಅದ್ಭುತ ಗೌರವಕ್ಕೆ ಬೆರಗಾದೆ, ಆಗಲೇ ಅನ್ನಿಸಿತು, ಭಾರತೀಯ ನ್ರತ್ಯದಲ್ಲಿ ಏನೋ ಇದೆ, ಅದನ್ನು ಕಲಿಯಬೇಕು, ಅಸ್ವಾದಿಸಬೇಕು” ಎನ್ನುವ ಪೂಜಾ ಭಾರತೀಯ ನ್ರತ್ಯ ಪ್ರಕಾರಗಳಲ್ಲಿ ಬಹಳಷ್ಟು ಸಂಶೋಧನೆ ಮಾಡಿದ್ದಾರೆ.
ಉಡುಪಿಯಲ್ಲಿ ಯಕ್ಷಗಾನ ವೇಷ-ಭೂಷಣ ಮಾಡುವುದನ್ನು ಕಲಿತ ಇವರು ನಂತರ ಹತ್ತು ಹಲವು ಭಾರತೀಯ ನ್ರತ್ಯಗಳಿಗೆ ವೇಷ-ಭೂಷಣ ಹಾಕುವುದನ್ನು ಕಲಿತರು. ಇದೇ ಸಂದರ್ಭದಲ್ಲಿ ಓರಿಸ್ಸಾದ ಪುರಿ ಜಗನ್ನಾಥ ರಥೋತ್ಸವವನ್ನು ವೀಕ್ಷಿಸುವ ಅವಕಾಶ ಇವರಿಗೆ ಲಭಿಸಿತು. ಅಲ್ಲಿಯ ಆ ಮನಮೋಹಕ ಓಡಿಸ್ಸಿ ನ್ರತ್ಯ, ಅವರ ಶ್ರದ್ಧೆ, ಜಗನ್ನಾಥನಲ್ಲಿ ತಮ್ಮನ್ನು ಸಮರ್ಪಿಸಿಕೊಳ್ಳುವ ಪರಿ, ಅವನನ್ನು ಒಲಿಸಿಕೊಳ್ಳುವ ನಾಟ್ಯ ಶೈಲಿ ಇವರ ಜೀವನ ಶೈಲಿಯನ್ನೇ ಬದಲಿಸಿಬಿಟ್ಟಿತು. ಅಂದೇ ನಿರ್ಧರಿಸಿದರಂತೆ ” ಇದೇ ನ್ರತ್ಯವನ್ನು ತಾನು ಕಲಿಯಬೇಕು, ಅದರ ಸತ್ವವನ್ನು ಅರಿಯಬೇಕು, ಆ ಜಗನ್ನಾಥನಲ್ಲಿ ತಲ್ಲೀನವಾಗುವ ಯಾವ ಮಹಾಶಕ್ತಿ ಈ ಓಡಿಸ್ಸಿ ನ್ರತ್ಯಕ್ಕಿದೆ ಎನ್ನುವುದನ್ನು ತಾವು ಮನಗಾಣಬೇಕು” ಎಂಬುದಾಗಿ.
ಇದೇ ಸಂದರ್ಭದಲ್ಲಿ ಭಾರತೀಯ ನ್ರತ್ಯ ಅಕಾಡೆಮಿಯ ಫೆಲೋಶಿಪ್ ಲಭಿಸಿತು. ಅಲ್ಲಿಂದ ಅನಿಟ್ಟೆ ಪೂಜಾ ತಿರುಗಿ ನೋಡಲಿಲ್ಲ. ಮೂರು ವರುಷ ಕುಚಿಪುಡಿ ಕಲಿತರು. ಇದರ ನಡುವೆಯೇ ಕೇರಳದ ಸಾಂಪ್ರದಾಯಿಕ ನ್ರತ್ಯ ”ಥೆಯ್ಯಾಮ್” ನೋಡುವ ಸೌಭಾಗ್ಯ ಒದಗಿತು. ಆದರೆ ಅದು ಪುರುಷರಿಗೆ ಮಾತ್ರ ಎಂದು ತಿಳಿದು ಬೇಸರಗೊಂಡರು. ತದ ನಂತರ ರಾಜಸ್ಥಾನದ ಪ್ರಸಿದ್ಧ ನ್ರತ್ಯ ”ಕಲಬೆಲಿಯಾ” ನ್ರತ್ಯ, ಹಠಯೋಗ ಶಿಕ್ಷಣ, ಕಥಕ್ಕಳಿ, ಭರತನಾಟ್ಯ ಹೀಗೆ ಸಿಕ್ಕಿದ ಅವಕಾಶಗಳನ್ನು ಉಪಯೋಗಿಸಿಕೊಂಡರು. ”ಕಲೆ ಸಾಧಕನ ಸೊತ್ತು” ಎಂಬುದನ್ನು ಅಕ್ಷರಷ: ನಿಜ ಮಾಡಿದ ಅನಿಟ್ಟೆ ಪ್ರಸಿದ್ಧ ಓಡಿಸ್ಸಿ ನ್ರತ್ಯ ಗುರು ಶ್ರೀ ಗುರು ಹರಿಕ್ರಷ್ಣ ಬೆಹ್ರಾ ರಲ್ಲಿ ೬ ವರ್ಷಗಳ ಕಾಲ ನ್ರತ್ಯಾಭ್ಯಾಸ ಮಾಡಿದರು. ಇದೇ ಸಂದರ್ಭದಲ್ಲಿ ಒಂದೂವರೆ ವರ್ಷದ ಮಗಳನ್ನು ಬಿಟ್ಟಿರಲಾಗದ, ನ್ರತ್ಯವನ್ನು ಬಿಡಲೊಲ್ಲದ ದ್ವಂದ್ವ ಇವರನ್ನು ಕಾಡಿತು. ಕೊನೆಗೂ ಗೆದ್ದದ್ದು ಓಡಿಸ್ಸಿ ನ್ರತ್ಯವೇ. ತಮ್ಮ ಮಗಳನ್ನು ತಮ್ಮೊಂದಿಗೆ ಕೂರಿಸಿಕೊಂಡೇ ನ್ರತ್ಯ ಕಲಿತು ಶಹಬ್ಬಾಸ್ ಎನಿಸಿಕೊಂಡರು.

ಫೋಟೋ: ಅವಿನಾಶ್
ಸುಂದರ ಅಭಿನಯ, ತನ್ನ ನ್ರತ್ಯದೊಳಗಿನ ಭಾವನೆಗಳ ಮೇಲಿನ ಹಿಡಿತ, ಭಾರತೀಯ ಸಂಸ್ಕ್ರತಿಯ ಬಗೆಗಿನ ಆಳವಾದ ಜ್ನಾನ, ಕಥಾ-ಪುರಾಣಗಳ ವಿಶ್ಲೇಷಣೆ, ಎಂದೂ ತಪ್ಪದ ಗೆಜ್ಜೆಯೊಂದಿಗಿನ ಹೆಜ್ಜೆ ಅನಿಟ್ಟೆ ಪೂಜಾ ಅವರನ್ನು ಓಡಿಸ್ಸಿ ನ್ರತ್ಯ ರಂಗದ ಪ್ರತಿಭಾನ್ವಿತ ಕಲಾವಿದೆಯನ್ನಾಗಿ ಮಾಡಿವೆ. ”ವಿದ್ಯಾ ವಿನಯೇನ ಶೋಭಿತೇ” ಎನ್ನುವಂತಿರುವ ಇವರು ಸ್ವೀಡನ್ನಿನ ಅದೇಷ್ಟೋ ಮಕ್ಕಳಿಗೆ ಓಡಿಸ್ಸಿ ನ್ರತ್ಯವನ್ನು ಕಲಿಸುತ್ತಿದ್ದಾರೆ. ತಮ್ಮ ಗಂಡನೊಂದಿಗೆ ಸೇರಿಕೊಂಡು ”ವಿಶ್ವ ನ್ರತ್ಯ ಸಂಘ (World Dance Academy) ಸಮಯ ಸಿಕ್ಕಾಗಲೆಲ್ಲ ಭಾರತಕ್ಕೆ ಭೇಟಿ ನೀಡುವ ಪೂಜಾ ಪ್ರಸ್ತುತ ಅರುಣಾ ಮೊಹಾಂಟಿಯವರಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದಾರೆ. ಸ್ವೀಡಿಷ್ ಸರಕಾರದಿಂದ ಇವರಿಗೆ ಫೆಲೋಶಿಪ್ ಲಭಿಸಿದ್ದು ಅದು ನ್ರತ್ಯ ಕಲಿಯಲು ಹಾಗೂ ಭಾರತೀಯ ಸಂಸ್ಕ್ರತಿ ಅರಿಯಲು ಸಹಕಾರವಾಯಿತು ಎನ್ನುತ್ತಾರೆ ಅನಿಟ್ಟೆ ಪೂಜಾ. ”ಥೆಯ್ಯಾಮ ಮತ್ತು ಕಥಕ್ಕಳಿ ಕಲಿತಿದ್ದರಿಂದ ರಾಮಾಯಣ ಮತ್ತು ಮಹಾಭಾರತ ಕಥೆ ತಿಳಿಯಲು ಅನುಕೂಲವಾಯಿತು. ಭಾರತೀಯ ಸಂಸ್ಕ್ರತಿ ಮತ್ತು ಪರಂಪರೆ ನಿಜಕ್ಕೂ ಶ್ರೀಮಂತವಾದದ್ದು. ಬಹುಶ: ಇದಕ್ಕಾಗಿಯೇ ಭಾರತೀಯ ನ್ರತ್ಯ ಇಂದಿಗೂ ಚಿರನೂತನ, ದಿವ್ಯ ಚೇತನ” ಎನ್ನುವ ಪೂಜಾ ಅವರು ಭಾರತದ ಉದ್ದಗಲಕ್ಕೂ ಸಂಚರಿಸಿದ್ದಾರೆ. ಭಾರತವನ್ನು ಬಹುವಾಗಿ ಪ್ರೀತಿಸುವ ಇವರಿಗೆ ತಮ್ಮ ಮಕ್ಕಳಿಗೂ ಆ ಸಂಸ್ಕ್ರತಿಯನ್ನು ತಿಳಿಸುವ ಹಂಬಲವಿದೆ. ಭಾರತದಾದ್ಯಂತ ಹಲವಾರು ಕಡೆ ನ್ರತ್ಯ ಕಾರ್ಯಕ್ರಮ ನೀಡಿರುವ ಇವರು ಹಲವಾರು ಪ್ರಶಸ್ತಿಗಳನ್ನು ಗಳಿಸಿದ್ದಾರೆ. ಇದೀಗ ಸ್ವೀಡನ್ನಿನ ಗೊಥೆನ್ಬರ್ಗ್ ನಲ್ಲಿ ತಮ್ಮ ನ್ರತ್ಯ ಶಾಲೆ ನಡೆಸುತ್ತ ಇಲ್ಲಿಯೂ ನ್ರತ್ಯ ಕಾರ್ಯಕ್ರಮ ನೀಡುತ್ತಾ ಇಲ್ಲಿಯ ಜನರ ಮನ ಗೆದ್ದಿದ್ದಾರೆ.
ದೇಶಾಭಿಮಾನ ಎನ್ನುವುದು ಎಲ್ಲಿ? ಹೇಗೆ? ಟಿಸಿಲೊಡೆಯುತ್ತದೆ ಎಂದು ಹೇಳುವುದು ಕಷ್ಟ. ಅದು ಯಾವ ರೂಪದಲ್ಲಿ ಇರುತ್ತದೆಯೋ ಬಲ್ಲವರಾರು. ದೇಶದಲ್ಲಿದ್ದೇ ಪರಕೀಯರಾಗುವುದು, ಪರಕೀಯರಾಗಿದ್ದುಕೊಂಡೇ ದೇಶವನ್ನು ಪ್ರೀತಿಸುವುದು ಸೋಜಿಗವಲ್ಲವೇ? ನಮ್ಮ ಸಂಸ್ಕ್ರತಿ ಪರಂಪರೆಯನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತಿರುವ ಅನಿಟ್ಟೆ ಪೂಜಾ ಅವರನ್ನು ಅಭಿನಂದಿಸಲೇಬೇಕು.
Saturday, August 22, 2009
ತಮಗೆಲ್ಲರಿಗೂ ಧನ್ಯವಾದಗಳು..

ಕವನ ಸಂಕಲನಕ್ಕೆ ಮೆಚ್ಚುಗೆಯ ನುಡಿಯಾಡಿದ ಶ್ರೀ ಕೆ ಏನ್ ಹೊಸಮನಿಯವರಿಗೆ ಧನ್ಯವಾದ. 
ಕವನ ಸಂಕಲನವನ್ನು ಅಂದವಾಗಿ ಮುದ್ರಿಸಿದ ಸೂರ್ಯ ಪ್ರಿಂಟರ್ಸ್ ಅವರಿಗೆ ಧನ್ಯವಾದ

Wednesday, August 5, 2009
ರಕ್ಷಾ ಬಂಧನ ದ ಹಾರ್ದಿಕ ಶುಭಾಶಯಗಳು.
Sunday, July 5, 2009
ಕವನ ಸಂಕಲನ ಬಿಡುಗಡೆ ಸಮಾರಂಭಕ್ಕೆ ಒಲವಿನ ಆಮಂತ್ರಣ

ಬರೆದೆ, ಬರೆದದ್ದನ್ನು ಹಂಚಿಕೊಳ್ಳುವ ಬಯಕೆ''
ಇದೇ ಬರುವ ಜುಲೈ 18, 2009 ರಂದು ನನ್ನ ಪ್ರಪ್ರಥಮ ಕವನ ಸಂಕಲನ
''ಸಾಗರದಾಚೆಯ ಇಂಚರ''
ಬಿಡುಗಡೆಗೊಳ್ಳಲಿದೆ.
ತಮಗೆಲ್ಲ ಆದರದ ಸ್ವಾಗತ,ಸುಸ್ವಾಗತ......
ಸಮಯ : ಮಧ್ಯಾನ್ಹ 3 ಗಂಟೆಗೆ,
ಸ್ಥಳ : ಗಜಾನನ ಪ್ರೌಡಶಾಲೆ ಸಂಪಖಂಡ,ಸಿರ್ಸಿ
ಕವನ ಸಂಕಲನ ಬಿಡುಗಡೆ : ಶ್ರೀ ಕೆ ಏನ್,ಹೊಸಮನಿ , ಪ್ರಾಂಶುಪಾಲರು, ಮಾರಿಕಾಂಬ ಜೂನಿಯರ್ ಕಾಲೇಜ್ ಅವರಿಂದ.
ಕವನ ಸಂಕಲನ ವಿಮರ್ಶೆ : ಶ್ರೀ ಅಶ್ವಥ್ ಭಾರದ್ವಾಜ,ಕನ್ನಡ ಉಪನ್ಯಾಸಕರು, ಉಡುಪಿ ಅವರಿಂದ
ಮುಖ್ಯ ಅತಿಥಿಗಳಾಗಿ : ಎಸ್.ಏನ್.ಹೆಗಡೆ,ಮುಖ್ಯೋಪಾದ್ಯಾಯರು , ಶ್ರೀ ಗಜಾನನ ಪ್ರೌಢಶಾಲೆ ಸಂಪಖಂಡ , ಸಿರಸಿ
ಅದ್ಯಕ್ಷರು : ಶ್ರೀ ಎಸ್ ಎಸ್ ಹೆಗಡೆ, ಶ್ರೀ ಗಜಾನನ ವಿದ್ಯಾವರ್ಧಕ ಸಂಘ, ಸಂಪಖಂಡ
ಅದೇ ದಿನ ಸಂಜೆ 5-30 ರಿಂದ ಹೆಸರಾಂತ ಹಿಂದುಸ್ತಾನೀ ಗಾಯಕಿ
ಶ್ರೀಮತಿ ವಾಣಿ ಹರ್ಡಿಕರ್
ಅವರಿಂದ
''ಹಿಂದುಸ್ತಾನೀ ಗಾಯನ''
ಕಾರ್ಯಕ್ರಮವಿದೆ.
ನೀವೆಲ್ಲರೂ ಬನ್ನಿ,
ನಿಮ್ಮವರನ್ನೂ ಕರೆತನ್ನಿ.
ನಿಮ್ಮ ನಿರೀಕ್ಷೆಯಲ್ಲಿ ಗುರು ಬಬ್ಬಿಗದ್ದೆ
Tuesday, June 30, 2009
ಸಾಗರದಾಚೆಯ ಇಂಚರ...

ಇಂಚರವೋ, ಇಂಚರವೋ
ಸಾಗರದಾಚೆಯ ಇಂಚರವೋ
ಗೀತೆಯಲಿ, ಸಂಗೀತದಲಿ, ಅಂಚಲಿ ಮಿಂಚಿದ ಇಂಚರವೋ
ಜಿಗಿದಾಡಿವೆ ಬಾನಿಗೆ ಹಕ್ಕಿಗಳು
ಗೂಡನು ಮರೆತು ಹೋಗದಿರಿ
ನಭದಲಿ ಸೆಳೆಯುವ ಛಲವಿಹುದು
ಬೇರನು ಬಿಟ್ಟು ತೊಲಗದಿರಿ
ಹೊಸತನ, ಹೊಸಕ್ಷಣ ಹೊಸದು ನಿಜ
ಹೊಸದರಲಿ ಎಲ್ಲವೂ ಸಹಜ
ನಿಮ್ಮೆಲ್ಲರ ತನುವಿದು ಜತನದಲಿ
ಸತತವೂ ಇಹುದು ತಾಯ್ನಾಡಿನಲಿ
ಗೂಡಿಗೆ ಅದರದೇ ಅಧರವಿದೆ
ಉದರವ ಪೊರೆಯುವ ಸೆಳೆತವಿದೆ
ಸಾಗರದಾಚೆಗೆ ಸೇರದಿರು
ನೆಲವಿದು ನಿನಗೆ ಕಾಯುತಿದೆ
Wednesday, June 17, 2009
ಬರು ಬರುತ್ತಾ ರಾಯರ ಕುದುರೆ ಕತ್ತೆಯಾಯಿತೆ..

Thursday, May 28, 2009
ಅವಳು...
- ಗುರು ಬಬ್ಬಿಗದ್ದೆ
ಅವಳಿಂದಲೇ ಬಾಳು, ಅವಳಿಲ್ಲದೇ ಗೋಳು
ನನ್ನೆದೆಯ ಬಾಂದಳದಿ ಹೊಳೆವ ತಾರೆ ಅವಳು
ಚೈತ್ರಮಾಸದ ಕೋಗಿಲೆ, ಮಾಧುರ್ಯದವಳು
ಮುಂಗಾರಿನ ಮೋಡದ ಹಿಂದೆ ಸ್ವಾತಿಮುತ್ತು ಅವಳು
ನನ್ನ ಜೀವನ ಪುಟದಿ, ಅಕ್ಷರವಾದವಳು
ಸಕ್ಕರೆಯ ಮಾತಿನಲಿ, ಪ್ರೀತಿ ಕೊಟ್ಟವಳು
ನೋವಿರಲಿ, ನಲಿವಿರಲಿ, ಅನುಸರಿಸಿದವಳು
ತುಳಿದು ಸಪ್ತಪದಿ, ಸಂಗಾತಿಯಾದವಳು
ಹೊತ್ತು ಹೆತ್ತವರನೆಲ್ಲ, ಬಿಟ್ಟೆಲ್ಲ ಬಂದಿಹಳು
ಚಿತ್ತದಿ ನನ್ನಯ ಮನವ, ಮುದದಿ ಗೆದ್ದಿಹಳು
ತಾಯಿ ಮಮತೆಯ ಎನಗೆ ಧಾರೆ ಎರೆದಿಹಳು
ಎನ್ನಯ ಸಾಧನೆಗೆ ಸ್ಪೂರ್ಥಿ ಚಿಲುಮೆಯು ಅವಳು
Monday, May 25, 2009
ಸ್ವೀಡನ್ನಿನ ಪತ್ರಿಕೆಯಲ್ಲೊಂದು ನನ್ನ ಬಗೆಗಿನ ಬರಹ....
Thursday, May 21, 2009
ವಾಸ್ತವತೆ.....
-ಗುರು ಬಬ್ಬಿಗದ್ದೆ
ಹೊತ್ತು ಮೂಡುವ ಮೊದಲೇ ಹೊತ್ತಿ ಉರಿಯಿತು ಬೆಂಕಿ
ಹಚ್ಚ ಹಸುರಿನ ಹಸುಳೆ ಬಾಳದಾರಿಯ ಕನಸು
ಹಚ್ಚನೆಯ ಕೆಸರಿನಲಿ ನುಚ್ಚು ನೂರಾಯಿತು
ನಿತ್ಯ ಬರುವ ಗಾಳಿ ಎತ್ತಿ ತಂದಿತು ಉರಿಯ
ನಗುವ ಮರೆಸುತ ಮನದಿ ವಿಷ ತುಂಬಿತು
ಜಾತಿ-ಜಾತಿಯ ನಡುವೆ ದ್ವೇಷಾಸೂಯೆಯ ಬೆಂಕಿ
ಜಾತ್ಯಾತೀತತೆ ನಮ್ಮ ಕನಸಾಯಿತು
ಕಣ್ಣ ಬೆಳಗುವ ಬೆಳಕು ಕಣ್ಣನ್ನೇ ಕೊರೆದಿತ್ತು
ಹಣ್ಣ ಕೊಯ್ಯುವ ಕತ್ತಿ ಕತ್ತು ಕೊಯ್ದಿತ್ತು
ನಾ ಮೇಲು ನೀ ಮೇಲು ಎಂಬ ಒಣ ಭಾವನೆಯು
ಬಟ್ಟ ಬಯಲಲಿ ಬಿಟ್ಟ ಕರುವಾಯಿತು
ಎಚ್ಚೆತ್ತ ಎಚ್ಚರಿಕೆ ಅಚ್ಚಳಿಯದೇ ಉಳಿದು
ಬಿತ್ತುತ್ತ ಪ್ರೇಮವನು ದ್ವೇಷವನು ತೊರೆದು
ಒಟ್ಟಿನಲಿ ಒಂದಾಗಿ ಬೆಚ್ಚನೆ ಹೊದಿಕೆಯ ಹೊದ್ದು
ಹೊತ್ತು ಇಳಿಯುವ ಮೊದಲೇ ಬೆಂಕಿ ಆರಿಸಿ ಜಗದಿ
ಹತ್ತಾರು ಹಸುಳೆಗಳ ಭವ್ಯ ದೇಶದ ಕನಸು
ಹೊತ್ತಿ ಬೆಳಗಲಿ ಮನದಿ ನಮಗೂ ವಯಸಾಯಿತು
Tuesday, May 12, 2009
ನನ್ನ ಅಂತರಂಗ....
- ಗುರು ಬಬ್ಬಿಗದ್ದೆ
ಭೋರ್ಗರೆದಿದೆ ನೀರ್ಗರೆದಿದೆ ಶೃಂಗಾರದ ಧಾತ್ರಿ
ಮೈ ಮನ ನವಿರೇಳಿಸುತಲಿ ಸಾಗಿದೆ ಹೊಸ ಮೈತ್ರಿ ೧
ಮಿಡಿಯುತ್ತಲಿ ಮಿಡಿಸುತ್ತಲಿ ನವ್ಯದ ನವ್ಯತೆಯನ್ನು
ಹುಟ್ಟುತ್ತಲಿ ಸಾಯುತ್ತಲಿ ಸಾಗಿಸಿ ಜೀವನವನ್ನು ೨
ಸ್ವಾತಂತ್ರ್ಯದ ಹೆಸರಲಿ ಸ್ವೇಚ್ಚಾಚಾರದ ಬದುಕು
ಉದ್ಧಾರದ ನೆಪದಲಿ ಸೃಷ್ಟಿಸುತಿವೆ ಒಡಕು ೩
ಆನಂದದ ಆಕ್ರಂದನ ಹೆಚ್ಚಿಸುತಿವೆ ಬಡತನ
ಸಿರಿವಂತಿಕೆ ಸಾಮ್ರಾಜ್ಯದಲಿ ಕರಗುತಿದೆ ತನು-ಮನ ೪
ಅನ್ನ ವಸ್ತ್ರದ ಬರದಿ ನಿರ್ಗತಿಕರ ಪಾಡೇನು
ಶೋಕಿ ಯುವತಿಯರಿಗೆ ಇದ್ದರೂ ವಸ್ತ್ರ ತೊಡಲು ಬರವೇನು ೫
ಹಗರಣಗಳ ಸರಮಾಲೆಯಲಿ ಕರಗುತಿದೆ ಹಣವು
ವಯ್ಯಾರದ ಶ್ರಂಗಾರಕೆ ಮುಡುಪಾಗಿದೆ ಸಿರಿತನವು ೬
ಹೇಳಲೂ ಆಗದೆ ಬಿಡಲೂ ಆಗದೆ ಸಾಗಿದೆ ಜೀವನ ನಾಟಕ ರಂಗ
ಇದನೆಲ್ಲವ ನೋಡಿದೊಡೆ ವಿಷಾದಿಪುದು ನನ್ನ ಅಂತರಂಗ ೭





